-
- ದ್ವಿಚಕ್ರ ವಾಹನವು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ವ್ಯಕ್ತಿ ನೋರ್ವ ಸಾವು ಮತ್ತೋರ್ವನಿಗರ ಗಂಬೀರ ಗಾಯ ಆಸ್ಪತ್ರೆ ಗೆ ದಾಖಲು.
ಶ್ರೀನಿವಾಸಪುರ : ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೆಲಿಜಿಗೂರು ಕ್ರಾಸ್ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಕಡಪ ನಿವಾಸಿಯಾದ ಜೀವನ್ ಕುಮಾರ್ (25) ಮೃತಪಟ್ಟ ದುರ್ದೈವಿ. ಇವರು ತಮ್ಮ ಸ್ನೇಹಿತನೊಂದಿಗೆ ಬೈಕ್ನಲ್ಲಿ ಕಡಪದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲನೆಯ ವೇಳೆ ದ್ವಿಚಕ್ರ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಜೀವನ್ ಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೈಕ್ನಲ್ಲಿದ್ದ ಮತ್ತೊಬ್ಬ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
